ದಿವ್ಯಾ ಹಾಗರಗಿ ಟೀಂಗೆ ನಿರೀಕ್ಷಣಾ ಜಾಮೀನು ನೀಡದಂತೆ ತಕರಾರು ಅರ್ಜಿ ಸಲ್ಲಿಸಿದ ಸಿಐಡಿ.

71
firstsuddi

ಕಲಬುರಗಿ : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ 15 ದಿನಗಳಿಂದ ತಲೆ ಮರೆಸಿಕೊಂಡಿರುವ ದಿವ್ಯಾ ಹಾಗರಗಿ ಮತ್ತು ಟೀಂಗೆ ನಿರೀಕ್ಷಣಾ ಜಾಮೀನು ನೀಡದಂತೆ ಸಿಐಡಿ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದೆ.

ಜ್ಞಾನಜ್ಯೋತಿ ಶಾಲೆಯಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮ ನಡೆದಿದೆ ಎನ್ನಲಾಗಿದ್ದು, ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ, ಪ್ರಾಂಶುಪಾಲ ಕಾಶಿನಾಥ್, ಮಂಜುನಾಥ ಮೇಳಕುಂದಿ, ಅರ್ಚನಾ ಹೊನಗೇರಿ, ಸುನಂದಾ ಸಿಐಡಿಯಿಂದ ತಲೆಮರೆಸಿಕೊಂಡು ಅಜ್ಞಾತ ಸ್ಥಳಕ್ಕೆ ತೆರಳಿದ್ದು, ಅಜ್ಞಾತ ಸ್ಥಳದಿಂದಲೇ ದಿವ್ಯಾ ಮತ್ತು ಟೀಮ್ ನೀರಿಕ್ಷಣಾ ಜಾಮೀನು ಕೋರಿ ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಆದರೀಗ ನೀರಿಕ್ಷಣಾ ಜಾಮೀನಿಗೆ ತಕರಾರು ಅರ್ಜಿ ಸಲ್ಲಿಸಿರುವ ಸಿಐಡಿ, ಇದು ಸಂಘಟಿತ ಅಪರಾಧ, ಜಾಮೀನು ಕೊಟ್ಟರೆ ಸಾಕ್ಷಿ ನಾಶಪಡಿಸುವ ಸಾಧ್ಯತೆ ಇದೆ. ಹೀಗಾಗಿ ಈ ಐವರಿಗೆ ನಿರೀಕ್ಷಣಾ ಜಾಮೀನು ನೀಡಬೇಡಿ ಎಂದು ಕಲಬುರಗಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದೆ.