ಬೆಂಗಳೂರು : ರೈತರ ಪ್ರತಿಭಟನೆ ವೇಳೆ ಗಲಭೆಗೆ ಪ್ರಚೋದನೆ ನೀಡುವ ಮಾಹಿತಿಯುಳ್ಳ ‘ಟೂಲ್ಕಿಟ್’ ಅನ್ನು ಇಂಟರ್ನೆಟ್ಗೆ ಅಪ್ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ದಿಶಾ ರವಿ ಅವರನ್ನು ಬಿಡುಗಡೆ ಮಾಡದಿದ್ದರೆ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ನಾಗೇಂದ್ರ ಅವರು ಹೇಳಿದ್ದಾರೆ.ರೈತರ ಪ್ರತಿಭಟನೆಗೆ ಬೆಂಬಲಿಸಿದ ದಿಶಾ ರವಿಯನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ. ಹೀಗಾಗಿ ಆಕೆಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.ಮುಂಬೈನಲ್ಲಿ ಹಲವಾರು ವಕೀಲರನ್ನು ಬಂಧಿಸಲಾಗಿದೆ. ಸರ್ವಾಧಿಕಾರಿಯಂತೆ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.










