ದೀಪಾವಳಿಯ ಬಲಿಪಾಡ್ಯಮಿ ಹಬ್ಬದಂದು ಗೋಪೂಜೆ ಮಾಡುವಂತೆ ಸರ್ಕಾರದ ಆದೇಶ…

62
firstsuddi

ಬೆಂಗಳೂರು : ದೀಪಾವಳಿ ಹಬ್ಬದ ಕೊನೆಯ ದಿನವಾದ ಬಲಿಪಾಡ್ಯಮಿಯ ಹಬ್ಬದಂದು ಗೋಪೂಜೆ ಮಾಡುವಂತೆ ಸರ್ಕಾರ ಆದೇಶಿಸಿದೆ.

ಸನಾತನ ಹಿಂದೂ ಧರ್ಮದ ಸಂಪ್ರದಾಯವನ್ನು ಉಳಿಸಿ, ಬೆಳಸುವ ನಿಟ್ಟಿನಲ್ಲಿ ದೀಪಾವಳಿಯ ಬಲಿಪಾಡ್ಯಮಿಯ ಹಬ್ಬದ ದಿನದಂದು ಧಾರ್ಮಿಕ ದತ್ತಿ ಇಲಾಖೆಯ ಎಲ್ಲ ದೇವಸ್ಥಾನಗಳಲ್ಲಿ ಸಂಜೆ 5:30 ಯಿಂದ 6:30ಯ ಗೋಧೂಳಿ ಲಗ್ನದಲ್ಲಿ ಗೋಪೂಜೆಯನ್ನ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯ/ಸಂಸ್ಥೆಗಳಲ್ಲಿ ಗೋವುಗಳಿಗೆ ಸ್ನಾನ ಮಾಡಿಸಿ, ದೇವಾಲಯಕ್ಕೆ ಕರೆತಂದು ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿ, ಅಕ್ಕಿ ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಹಸುವಿಗೆ ನೀಡಿ ಧೂಪ, ದೀಪಗಳಿಂದ ಪೂಜಿಸಿ ನಮಸ್ಕರಿಸುವ ವ್ಯವಸ್ಥೆ ಮಾಡುವ ಮೂಲಕ ಆ ದಿನದಂದು ಸಂಜೆ 5:30 ರಿಂದ 30ರ ವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ  ನಡೆಸಲು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.