ದುಬೈನಿಂದ ಆಗಮಿಸಿ ಕ್ವಾರಂಟೈನ್‍ನಲ್ಲಿದ್ದ ಯುವಕ ಆತ್ಮಹತ್ಯೆಗೆ ಶರಣು…

224
firstsuddi

ಬೀದರ್ : ದುಬೈನಿಂದ ಬಂದು ಕ್ವಾರಂಟೈನ್‍ನಲ್ಲಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಔರಾದ್ ತಾಲ್ಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಸಚಿನ್ ಜಾದವ್(21) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದ್ದು, ಯುವಕ ದುಬೈನಿಂದ ಕಳೆದ ಎಂಟು ದಿನಗಳ ಹಿಂದೆ ತನ್ನ ಪತ್ನಿಯೊಂದಿಗೆ ಜಿಲ್ಲೆಗೆ ಆಗಮಿಸಿದ್ದು, ಬಳಿಕ ಇಬ್ಬರನ್ನು ವನಮಾರಪ್ಪಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಇಂದು ಬೆಳಿಗ್ಗೆ ಕ್ವಾರಂಟೈನ್ ಕೇಂದ್ರದಲ್ಲಿ ಸಚಿನ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಈ ಕುರಿತು ಮಾಹಿತಿ ತಿಳಿದ ಔರಾದ್ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.