ಬೆಂಗಳೂರು: ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ ಪರಿಣಾಮ ಕಾಲೇಜು ವಿದ್ಯಾರ್ಥಿಯೊಬ್ಬ ಗಂಭಿರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ನಿನ್ನೆ ನಗರದ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಸುಹೇಲ್ ಎಂದು ಗುರುತಿಸಲಾಗಿದೆ. ಯುವಕ ಕಾಲೇಜು ಮುಗಿಸಿ ಮನೆಗೆ ಹೋಗುತ್ತಿರುವಾಗ, ಆತನ ಸಹಪಾಠಿಗಳೇ ಚಾಕುವಿನಿಂದ ಚುಚ್ಚಿ ಹಲ್ಲೆ ನಡೆಸಿದ್ದಾರೆ. ಸುಹೇಲ್ ಎಡಗೈ ಮತ್ತು ತೊಡೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.
ಡ್ಯಾನ್ಸ್ ಮಾಡುವ ವಿಚಾರಕ್ಕೆ ಸುಹೇಲ್ ಮತ್ತು ಆತನ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು ಎಂದು ತಿಳಿದುಬಂದಿದ್ದು, ಈ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗ್ತಿದೆ. ಘಟನೆ ಸಂಬಂಧ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










