ದೆಹಲಿ ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೀದರ್ ನ 11 ಮಂದಿಗೆ ಕೊರೊನಾ ಸೋಂಕು ದೃಢ…

138
firstsuddi

ಬೀದರ್ : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಬೀದರ್ ನಲ್ಲಿ ಇಂದು ಒಂದೇ ದಿನ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದಾಗಿ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ದೆಹಲಿಯ ನಿಜಾಮುದ್ದೀನ್ ಮರ್ಕಜ್ ಕಾರ್ಯಕ್ರಮದಲ್ಲಿ ಬೀದರ್ ನಿಂದ ಒಟ್ಟು 27 ಮಂದಿ ತೆರಳಿದ್ದರು. 27 ಮಂದಿಯ ಪೈಕಿ 11 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಇನ್ನು ಉಳಿದವರನ್ನು ಹೋಂ ಕ್ವಾರಂಟೈನ್‍ನಲ್ಲಿ ಇರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹದೇವ್ ಅವರು ತಿಳಿಸಿದ್ದಾರೆ.