ದೆಹಲಿ ಮುಖ್ಯಮಂತ್ರಿಗೆ ಕೊರೊನಾ ಲಕ್ಷಣ-ಎಲ್ಲಾ ಕಾರ್ಯಕ್ರಮಗಳು ರದ್ದು…

153
firstsuddi

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅನಾರೋಗ್ಯ ಉಂಟಾಗಿದ್ದು, ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೇಜ್ರಿವಾಲ್ ಅವರಿಗೆ ನಿನ್ನೆಯಿಂದ ಜ್ವರ ಹಾಗೂ ಗಂಟಲು ಕಿರಿಕಿರಿ ಕಾಣಿಸಿಕೊಂಡಿದ್ದು, ಹೀಗಾಗಿ ನಾಳೆ ಬೆಳಿಗ್ಗೆ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗುತ್ತದೆ. ಕೊರೊನಾ ಲಕ್ಷಣಗಳು ಇರುವ ಹಿನ್ನೆಲೆ ನಿನ್ನೆ ಮಧ್ಯಾಹ್ನದಿಂದಲೇ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಮನೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.