ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ ಪಾಸಿಟಿವ್…

61
firstsuddi

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಕೇಜ್ರಿವಾಲ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ ನಾನು ಟೆಸ್ಟ್ಗೆ ಒಳಗಾಗಿದ್ದೆ. ಪರೀಕ್ಷೆಯಲ್ಲಿ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟಿದೆ. ನನಗೆ ಸೋಂಕಿನ ಗುಣಲಕ್ಷಣಗಳು ಕಡಿಮೆಯಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತೇನೆ. ಕಳೆದ ಕೆಲವು ದಿನಗಳಲ್ಲಿ ನನ್ನನ್ನು ಯಾರ್ಯಾರು ಭೇಟಿ ಮಾಡಿದ್ದಿರೋ ಅವರೆಲ್ಲರೂ ದಯವಿಟ್ಟು ಟೆಸ್ಟ್ ಮಾಡಿಸಿಕೊಳ್ಳಿ. ಜೊತೆಗೆ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.