ದೆಹಲಿಗೆ ತೆರಳಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ.

67
firstsuddi

ಬೆಂಗಳೂರು : ಸಂಸದೀಯ ಮಂಡಳಿ ಸದಸ್ಯರಾಗಿ ನೇಮಕವಾದ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಿರುವ ಮಾಜಿ ಸಿಎಂ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ.

ದೆಹಲಿ ಪ್ರಯಾಣಕ್ಕೂ ಮುನ್ನ ಕಾವೇರಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುತ್ತಿದ್ದೇನೆ. ನಂತರ ಅಮಿತ್ ಶಾ ಹಾಗೂ ಜೆ.ಪಿ. ನಡ್ದಾ ಅವರನ್ನು ಭೇಟಿಯಾಗುತ್ತಿದ್ದೇನೆ. ನಾಳೆ ಸಂಜೆ ವಾಪಸ್ ಬರಬೇಕು ಎಂದುಕೊಂಡಿದ್ದೇನೆ. ರಾಜನಾಥ್ ಸಿಂಗ್ ಸೇರಿದಂತೆ ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ. ಮುಂದೆ ಏನು ಕೆಲಸ ಮಾಡಬೇಕು ಎಂದು ಅವರ ಸಲಹೆ ಕೇಳುವುದು ನನ್ನ ಕರ್ತವ್ಯ ಎಂದು ತಿಳಿಸಿದರು.