ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್​​ಡಿಎಕ್ಸ್​ ಪತ್ತೆ…

190
firstsuddi

ನವದೆಹಲಿ : ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ತಡರಾತ್ರಿ 3ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಅನುಮಾನಾಸ್ಪದ ಬ್ಯಾಗ್ ಇರುವುದಾಗಿ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಇದರಿಂದ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ ಬ್ಯಾಗ್‍ನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು, ಬ್ಯಾಗ್‍ನಲ್ಲಿ ಆರ್​​ಡಿಎಕ್ಸ್​ ಇರುವುದು ಪತ್ತೆಯಾಗಿದೆ ಎಂಬ ಮಾಹಿತಿ ಹೊರ ಬಿದ್ದಿದ್ದು, ಟರ್ಮಿನಲ್ 2 ಮತ್ತು 3ರ ಮಾರ್ಗವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.