ನವದೆಹಲಿ : ಇಂದಿನಿಂದ ದೇಶಾದ್ಯಂತ ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಪ್ರಾರಂಭವಾಗುತ್ತಿದೆ.
ಏಮ್ಸ್ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಎರಡನೇ ಸುತ್ತಿನ ಲಸಿಕೆ ಅಭಿಯಾನದಲ್ಲಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಪುದುಚೆರಿಯ ಸಿಸ್ಟರ್ ಪಿ ನಿವೇದಿತಾ ಅವರು ಕೊವಾಕ್ಸಿನ್ ಲಸಿಕೆಯನ್ನು ಪ್ರಧಾನಿ ಮೋದಿಯವರಿಗೆ ಹಾಕಿದ್ದಾರೆ.
ಲಸಿಕೆ ಹಾಕಿಸಿಕೊಂಡ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ ಅವರು ಲಸಿಕೆ ತೆಗೆದುಕೊಳ್ಳಲು ಅರ್ಹರೆಲ್ಲರೂ ಲಸಿಕೆ ಹಾಕಿಸಿಕೊಳ್ಳಿ, “ಒಟ್ಟಾಗಿ ನಾವು ಭಾರತವನ್ನು ಕೊರೊನಾ ಮುಕ್ತಗೊಳಿಸೋಣ” ಎಂದು ಮನವಿ ಮಾಡಿಕೊಂಡಿದ್ದಾರೆ.










