ದೆಹಲಿಯ ಪ್ರಮುಖ ಸ್ಥಳಗಲ್ಲಿ ಬಾಂಬ್ ಸ್ಪೋಟಿಸಲು ಸಂಚು ರೂಪಿಸಿದ್ದ ಐಸಿಸ್ ಉಗ್ರನ ಬಂಧನ…

133
firstsuddi

ನವದೆಹಲಿ : ಪ್ರಮುಖ ಸ್ಥಳಗಳಲ್ಲಿ ಬಾಂಬ್ ಸ್ಪೋಟಿಸಲು ಸಂಚು ರೂಪಿಸಿದ್ದ ಓರ್ವ ಶಂಕಿತ ಐಸಿಸ್ ಉಗ್ರನನ್ನು ಬಂಧಿಸಲಾಗಿದೆ. ನಿನ್ನೆ ತಡರಾತ್ರಿ ದೆಹಲಿಯ ದೌಲ ಕುವಾನ್ ರಿಂಗ್ ಬಳಿ ಉಗ್ರನಿರುವ ಬಗ್ಗೆ ಖಚಿತ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಪೊಲೀಸರು ಹಾಗೂ ಉಗ್ರನ ನಡುವೆ ಗುಂಡಿನ ದಾಳಿ ನಡೆದಿದ್ದು, ಬಳಿಕ ಉಗ್ರನನ್ನು ಬಂಧಿಸಿ ಉಗ್ರನ ಬಳಿ ಇದ್ದ 2 ಐಇಡಿ ಸ್ಪೋಟಕ ಹಾಗೂ ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಉಗ್ರ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್ ಸ್ಪೋಟಿಸಲು ಸಂಚು ರೂಪಿಸಿ ದಾಳಿ ನಡೆಸಬೇಕೆಂದಿದ್ದ ಪ್ರದೇಶಗಳಿಗೆ ಭೇಟಿ ನೀಡಿದ್ದರು ಎಂದು ತಿಳಿದು ಬಂದಿದೆ.