ದೆಹಲಿಯ ಫ್ಲೈಓವರ್ ಬಳಿ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆ…

67
firstsuddi

ನವದೆಹಲಿ: ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಂತೆ ಇನ್ನೊಂದು ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬರ ತುಂಡು ತುಂಡಾದ ದೇಹದ ಭಾಗಗಳನ್ನು ದೆಹಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ದೆಹಲಿಯಲ್ಲಿ ಕೆಲವು ತಿಂಗಳ ಹಿಂದೆ ನಡೆದಿದ್ದ ಶ್ರದ್ಧಾ ವಾಕರ್ ಹತ್ಯೆ ಮತ್ತೊಮ್ಮೆ ನೆನಪಿಗೆ ಬಂದಿದೆ, ಲಿವ್ ಇನ್ ರಿಲೇಷನ್ ಸಂಗಾತಿಯಾಗಿದ್ದ ಅಫ್ತಾಬ್ ಪೂನಾವಾಲಾ ಎಂಬಾತ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ಒಳಗೆ ಶೇಖರಿಸಿಟ್ಟು 18 ದಿನಗಳ ಕಾಲ ನಗರದ ವಿವಿಧೆಡೆ ಎಸೆದು ಬಂದಿದ್ದ, ಕೆಲವನ್ನು ಸುಟ್ಟಿದ್ದ, ಬಳಿಕ ದೆಹಲಿ ಪೊಲೀಸರು ಆತನನ್ನು ಬಂಧಿಸಿ, ಕೊಲೆ, ಸಾಕ್ಷ್ಯ ನಾಶದ ಆರೋಪ ಹೊರಿಸಿದ್ದರು.

ಈಗಲೂ ಇಂಥದ್ದೇ ಘಟನೆ ನಡೆದಿದ್ದು, ಮೃತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ, ಸಾಕ್ಷ್ಯಗಳನ್ನು ಕಲೆ ಹಾಕಿ, ಆರೋಪಿಯ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ.