ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್‌ಜೆಟ್ ವಿಮಾನ ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ.

67
firstsuddi

ನವದೆಹಲಿ: ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಸ್ಪೈಸ್‌ಜೆಟ್ ಎಸ್​ಜಿ-11 ವಿಮಾನ ಇಂದು ಬೆಳಗ್ಗೆ ದೆಹಲಿಯಿಂದ ದುಬೈ ತೆರಳುತ್ತಿತ್ತು. ಈ ವೇಳೆ ಇಂಡಿಕೇಟರ್ ಲೈಟಿಂಗ್ ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನವನ್ನು ಕರಾಚಿಗೆ ಮರಳಿಸಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಯಾವುದೇ ಸಮಸ್ಯೆ ಉಂಟಾಗದಂತೆ ಪ್ರಯಾಣಿಕರನ್ನು ವಿಮಾನದಿಂದ ಇಳಿಸಲಾಗಿದೆ. ವಿಮಾನದಲ್ಲಿ ಈ ಹಿಂದೆ ಯಾವುದೇ ದೋಷ ಕಂಡು ಬಂದ ಬಗ್ಗೆ ವರದಿಯಾಗಿಲ್ಲ. ಪ್ರಯಾಣಿಕರನ್ನು ದುಬೈಗೆ ಕರೆದೊಯ್ಯಲು ಬದಲಿ ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಪೈಸ್‌ಜೆಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.