ದೇವಾಲಯದಲ್ಲಿ ದೇವರಿಗೆ ಪೂಜೆ ಸಲ್ಲಿಸುತ್ತಿದ್ದ ವೇಳೆ ಕುಸಿದು ಬಿದ್ದು ಅರ್ಚಕ ಸಾವು…

195
firstsuddi

ಮಂಡ್ಯ : ದೇವಾಲಯದಲ್ಲಿ ದೇವರಿಗೆ ಪೂಜೆ ಸಲ್ಲಿಸುತ್ತಿದ್ದ ವೇಳೆ ಕುಸಿದು ಬಿದ್ದು ಅರ್ಚಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಂಗಲ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್(40) ಮೃತ ಅರ್ಚಕ ಎಂದು ಗುರುತಿಸಲಾಗಿದೆ. ಜಿಲ್ಲೆಯ ಮಂಗಲ ಗ್ರಾಮದ ಮಲ್ಲೇಶ್ವರಸ್ವಾಮಿ ದೇವಾಲಯದಲ್ಲಿ ದೇವರಿಗೆ ಪೂಜೆ ಸಲ್ಲಿಸುತ್ತಿದ್ದ ವೇಳೆ ಗರ್ಭಗುಡಿಯಲ್ಲೇ ಧಿಡೀರ್ ಕುಸಿದು ಬಿದ್ದು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.