ದೇವೇಗೌಡರು, ಕುಮಾರಣ್ಣ ಇಲ್ವಾ, ನಾನೇಕೆ ಕಾಂಗ್ರೆಸ್‌ಗೆ ಹೋಗಲಿ? : ಹೆಚ್ ಡಿ ರೇವಣ್ಣ.

67
firstsuddi

ಹಾಸನ: ದೇವೇಗೌಡರು, ಕುಮಾರಣ್ಣ ಇಲ್ವಾ, ನಾನೇಕೆ ಕಾಂಗ್ರೆಸ್‌ಗೆ ಹೋಗಲಿ? ಎಂದು ಹೆಚ್ ಡಿ ರೇವಣ್ಣ ಹೇಳಿದ್ದಾರೆ.

ಹೊಳೆನರಸೀಪುರದಲ್ಲಿ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಮತ್ತು ನನ್ನ ನಡುವಿನ ಬಾಂಧವ್ಯ ಬೇರೆ. ದೇವೇಗೌಡರು, ಕುಮಾರಣ್ಣ ಇಲ್ವಾ? ನಾನೇಕೆ ಕಾಂಗ್ರೆಸ್‌ಗೆ ಹೋಗಲಿ? ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ, ನಾನು ಕುಮಾರಣ್ಣ ಮೊದಲೇ ಮಾತನಾಡಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಎಲ್ಲೂ ಹೇಳಿಲ್ಲ. ದೇವೇಗೌಡರು ಮಾತ್ರ ನಮಗೆ ಸರ್ವೊಚ್ಛ ನಾಯಕರು. ನಾನು ಈಗಾಗಲೇ ಅವರ ಬಳಿ ಹೇಳಿದ್ದೇನೆ. ಅವರು ಏನು ಹೇಳುತ್ತಾರೆ. ಅದಕ್ಕೆ ನಾನು ಬದ್ಧನಾಗಿದ್ದೇನೆ. ದೇವೇಗೌಡರು ಹಾಸನ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡ್ತೀನಿ ಅಂದ್ರೂ ಓಕೆ ಅಂತೀನಿ ಎಂದರು.

ಹಾಸನದಲ್ಲಿ ಶಕುನಿಗಳು ತಲೆಕೆಡಿಸುತ್ತಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಅಂತಹ ಹೇಳಿಕೆಗಳಿಗೆ ನಾನು ತಲೆಕೆಡಿಸಿಕೊಳ್ಳುವಂತಹ ವ್ಯಕ್ತಿಯಲ್ಲ. ಯಾರೂ ಕೂಡ ನನ್ನ-ಕುಮಾರಣ್ಣನನ್ನ ಹೊಡೆದಾಡಿಸಲು ಸಾಧ್ಯವಿಲ್ಲ. ಬೆಳಗಾವುದರೊಳಗೆ ಒಂದಾಗ್ತೀವಿ ಎಂದಿದ್ದಾರೆ.