ದೇಶಕ್ಕೆ ಕೊರೊನಾಘಾತ-ನಿನ್ನೆ ಒಂದೇ ದಿನ ದೇಶದಲ್ಲಿ 7,466 ಮಂದಿಗೆ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 1,65,799ಕ್ಕೆ ಏರಿಕೆ…

160
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 7,466 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,65,799ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಅಂದೇ ದಿನ 175 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 4,706ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,65,799 ಮಂದಿ ಸೋಂಕಿತರ ಪೈಕಿ 71,105 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 89,987 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.