ದೇಶಕ್ಕೆ ಕೊರೊನಾಘಾತ-ನಿನ್ನೆ ಒಂದೇ ದಿನ ದೇಶದಲ್ಲಿ 5,242 ಕೊರೊನಾ ಪ್ರಕರಣ ಪತ್ತೆ-152 ಮಂದಿ ಸಾವು…

164

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ 5,242 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 96,169ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ ಕೊರೊನಾ ಸೋಂಕಿಗೆ 157 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ 3,029ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಅತೀ ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, ಈ ವರೆಗೆ ಮಹಾರಾಷ್ಟ್ರದಲ್ಲಿ 33,053 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 1,198 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ 96,169 ಮಂದಿ ಸೋಂಕಿತರ ಪೈಕಿ ಈವರೆಗೆ 36,824 ಮಮದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 59,345 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.