ದೇಶದ ಇಸ್ಲಾಂ ಸಮುದಾಯದ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದ ಪ್ರಧಾನಿ, ರಾಷ್ಟ್ರಪತಿ…

78
firstsuddi

ನವದೆಹಲಿ: ಇಂದು ದೇಶದಾದ್ಯಂತ ಬಕ್ರೀದ್ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಸ್ಲಾಂ ಸಮುದಾಯದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ಕೋರಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್ ಮಾಡಿ, ಈದ್-ಉಲ್-ಅಧಾದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್ ಮುಬಾರಕ್ ಎಂದು ಶುಭಾಶಯಗಳನ್ನು ತಿಳಿಸಿದ್ದಾರೆ.

ಇನ್ನು ದೇಶದ ರಾಷ್ಟ್ರಪತಿ ಕೂಡ ದೇಶದ ಇಸ್ಲಾಂ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಜ್-ಜುಹಾ ಈ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಈದ್-ಉಜ್-ಜುಹಾ ಪ್ರೀತಿ, ತ್ಯಾಗದ ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಪರಿತ್ಯಾಗದ ಮಾರ್ಗವನ್ನು ಅನುಸರಿಸಲು ಮತ್ತು ಮಾನವೀಯತೆಯ ಸೇವೆಯನ್ನು ನಿಸ್ವಾರ್ಥವಾಗಿ ಮಾಡಲು ಪ್ರೇರೇಪಿಸುತ್ತದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯನ್ನು ಹೆಚ್ಚಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ಟ್ವಿಟರ್ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಬಕ್ರೀದ್ ತ್ಯಾಗದ ಹಬ್ಬ. ಇದು ಇಸ್ಲಾಮಿಕ್ ಸಮುದಾಯವು ಆಚರಿಸುವ ಎರಡನೇ ಪ್ರಮುಖ ಹಬ್ಬವಾಗಿದೆ. ಈ ದಿನವನ್ನು ಪ್ರವಾದಿ ಇಬ್ರಾಹಿಂ ಅವರು ತಮ್ಮ ಮಗನ ತ್ಯಾಗವನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಈದ್ ಉಲ್ ಅಧಾವನ್ನು ಆಚರಿಸಲಾಗುತ್ತದೆ.