ದೇಶದ ಮೊಟ್ಟ ಮೊದಲ ಸೀಪ್ಲೇನ್ ಗೆ ಪ್ರಧಾನಿ ಮೋದಿ ಚಾಲನೆ…

129
firstsuddi

ಗಾಂಧಿನಗರ : ದೇಶದ ಮೊದಲ ಸೀಪ್ಲೇನ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 145ನೇ ವರ್ಷದ ಜನ್ಮ ದಿನದ ಅಂಗವಾಗಿ ಇಂದು ಈ ಯೋಜನೆಗೆ ಚಾಲನೆ ನೀಡಿದ್ದು, ಇದು ದೇಶದ ಮೊಟ್ಟ ಮೊದಲ ಸೀ ಪ್ಲೇನ್ ವಿಮಾನ ವ್ಯವಸ್ಥೆಯಾಗಿದೆ. ಈ ಸೀಪ್ಲೇನ್ ಗುಜರಾತ್‍ನ ಸಬರಮತಿ ನದಿ ತೀರದಿಂದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ಇರುವ ಸ್ಥಳಕ್ಕೆ ಸಂಪರ್ಕ ಕಲ್ಪಿಸುತ್ತದೆ. ಅಹಮದಾಬಾದ್ ಮತ್ತು ಕೆವಾಡಿಯಾ ನಡುವೆ ಪ್ರಯಾಣಿಸಲು ನಾಲ್ಕು ಗಂಟೆ ಸಮಯ (205 ಕಿಮೀ) ತೆಗೆದುಕೊಳ್ಳುತ್ತದೆ. ಆದರೆ ಸೀಪ್ಲೇನ್ ಸುಮಾರು ಒಂದು ಗಂಟೆಯಲ್ಲಿ ಪ್ರಯಾಣವನ್ನು ಮಾಡಲಿದ್ದು, ಕೆವಾಡಿಯಾದ ಸರ್ದಾರ್‌ ಸರೋವರ ಡ್ಯಾಮ್‌ನ ಹಿನ್ನೀರಿನಲ್ಲಿ ವಿಮಾನ ಇಳಿಯಲಿದೆ.
ಈ ಸೀಪ್ಲೇನ್ ಯೋಜನೆಯ ಸೇವೆಯನ್ನು ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದು, 19 ಆಸನಗಳನ್ನು ಹೊಂದಿರುವ ವಿಮಾನದಲ್ಲಿ 12 ಪ್ರಯಾಣಿಕರು ಏಕಕಾಲದಲ್ಲಿ ಪ್ರಯಾಣ ಮಾಡಬಹುದು. ಇನ್ನು ಟಿಕೆಟ್ ದರವನ್ನು ಒಬ್ಬರಿಗೆ 4,800 ರೂ. ನಿಗದಿ ಮಾಡುವ ಸಾಧ್ಯತೆ ಇದ್ದು, ಪ್ರತಿದಿನ ಸೀಪ್ಲೇನ್ ವಿಮಾನ ಅಹಮದಾಬಾದ್ನಿಂದ ಕೆವಾಡಿಯಾಗೆ 4 ಬಾರಿ, ಮತ್ತು ಕೆವಾಡಿಯಿಂದ ಅಹಮದಾಬಾದ್ಗೆ 4 ಬಾರಿ ಸಂಚಾರ ಮಾಡಲಿದೆ.