ದೇಶದಲ್ಲಿ 113 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,36,080ಕ್ಕೆ ಏರಿಕೆ…

35
firstsuddi

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 113 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,36,080ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,580ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,50,36,080 ಮಂದಿ ಸೋಂಕಿತರ ಪೈಕಿ ಈವರೆಗೆ 4,45,01,890 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.