ದೇಶದಲ್ಲಿ 11,610 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,09,37,320ಕ್ಕೆ ಏರಿಕೆ…

120
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,610 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,09,37,320ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 100 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,55,913ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,09,37,320 ಮಂದಿ ಸೋಂಕಿತರ ಪೈಕಿ ಈವರೆಗೆ 1,06,44,858 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.