ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,649 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,09,16,589ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 90 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,55,732ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,09,16,589 ಮಂದಿ ಸೋಂಕಿತರ ಪೈಕಿ ಈವರೆಗೆ 1,06,21,220 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










