ದೇಶದಲ್ಲಿ 13,193 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,09,63,394ಕ್ಕೆ ಏರಿಕೆ…

116
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,193 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,09,63,394ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 97 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,56,111ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,09,63,394 ಮಂದಿ ಸೋಂಕಿತರ ಪೈಕಿ ಈವರೆಗೆ 1,06,67,741 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.