ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,32,364 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,85,74,350ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,713 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,40,702 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,85,74,350 ಮಂದಿ ಸೋಂಕಿತರ ಪೈಕಿ ಈವರೆಗೆ 2,65,97,655 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










