ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,313 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,42,60,470ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 549 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,57,740ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,42,60,470 ಮಂದಿ ಸೋಂಕಿತರ ಪೈಕಿ ಈವರೆಗೆ 3,36,41,175 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










