ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,786 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,41,43,236ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 231 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,53,042ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,41,43,236 ಮಂದಿ ಸೋಂಕಿತರ ಪೈಕಿ ಈವರೆಗೆ 3,35,14,449 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










