ದೇಶದಲ್ಲಿ 1,61,386 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,16,30,885ಕ್ಕೆ ಏರಿಕೆ…

62
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,61,386 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,16,30,885ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,733 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,97,975ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,16,30,885 ಮಂದಿ ಸೋಂಕಿತರ ಪೈಕಿ ಈವರೆಗೆ 3,95,11,307 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.