ದೇಶದಲ್ಲಿ 16,577 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,10,63,491ಕ್ಕೆ ಏರಿಕೆ…

115
Firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,577 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,10,63,491ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 120 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,56,825ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,10,63,491 ಮಂದಿ ಸೋಂಕಿತರ ಪೈಕಿ ಈವರೆಗೆ 1,07,50,680 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.