ದೇಶದಲ್ಲಿ 17,407 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,11,56,923ಕ್ಕೆ ಏರಿಕೆ…

110
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,407 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,11,56,923ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 89 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,57,435ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,11,56,923 ಮಂದಿ ಸೋಂಕಿತರ ಪೈಕಿ ಈವರೆಗೆ 1,08,26,075 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.