ದೇಶದಲ್ಲಿ 1,778 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,12,749ಕ್ಕೆ ಏರಿಕೆ…

57
firtsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,778 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,12,749ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 62 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,16,605ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,30,12,749 ಮಂದಿ ಸೋಂಕಿತರ ಪೈಕಿ ಈವರೆಗೆ 4,24,73,057 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.