ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,132 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,39,71,607ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 193 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,50,782ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,39,71,607 ಮಂದಿ ಸೋಂಕಿತರ ಪೈಕಿ ಈವರೆಗೆ 3,32,93,478 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










