ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,067 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,47,594ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 40 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,22,006ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,30,47,594 ಮಂದಿ ಸೋಂಕಿತರ ಪೈಕಿ ಈವರೆಗೆ 4,25,13,248 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










