ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,11,298 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,73,69,093ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,847 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,15,235 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,73,69,093 ಮಂದಿ ಸೋಂಕಿತರ ಪೈಕಿ ಈವರೆಗೆ 2,46,33,951 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










