ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,59,170 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,53,21,089ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,761 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,80,530ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,53,21,089 ಮಂದಿ ಸೋಂಕಿತರ ಪೈಕಿ ಈವರೆಗೆ 1,31,08,582 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










