ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,63,533 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,52,28,996ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,329 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,78,719ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,52,28,996 ಮಂದಿ ಸೋಂಕಿತರ ಪೈಕಿ ಈವರೆಗೆ 2,15,96,512 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










