ದೇಶದಲ್ಲಿ 3,52,991 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,73,13,163ಕ್ಕೆ ಏರಿಕೆ…

156
Firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,52,991 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,73,13,163ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,812 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,95,123ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,73,13,163 ಮಂದಿ ಸೋಂಕಿತರ ಪೈಕಿ ಈವರೆಗೆ 1,43,04,382 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.