ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 35,662 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,34,17,390ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 281 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,44,529ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,34,17,390 ಮಂದಿ ಸೋಂಕಿತರ ಪೈಕಿ ಈವರೆಗೆ 3,26,32,222 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










