ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,68,147 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,99,25,604ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,417 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,18,959ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,99,25,604 ಮಂದಿ ಸೋಂಕಿತರ ಪೈಕಿ ಈವರೆಗೆ 1,62,93,003 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










