ದೇಶದಲ್ಲಿ 3,86,452 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,87,62,976ಕ್ಕೆ ಏರಿಕೆ…

116
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,86,452 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,87,62,976ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,498 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,08,330ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,87,62,976 ಮಂದಿ ಸೋಂಕಿತರ ಪೈಕಿ ಈವರೆಗೆ 1,53,84,418 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.