ದೇಶದಲ್ಲಿ 4,12,262 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,10,77,410ಕ್ಕೆ ಏರಿಕೆ…

112
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,12,262 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,10,77,410ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,980 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,30,168ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,10,77,410 ಮಂದಿ ಸೋಂಕಿತರ ಪೈಕಿ ಈವರೆಗೆ 1,72,80,844 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.