ದೇಶದಲ್ಲಿ 41,649 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,16,13,993ಕ್ಕೆ ಏರಿಕೆ…

89
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,649 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,16,13,993ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 593 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,23,810ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,16,13,993 ಮಂದಿ ಸೋಂಕಿತರ ಪೈಕಿ ಈವರೆಗೆ 3,07,81,263 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.