ದೇಶದಲ್ಲಿ 4,272 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,83,360ಕ್ಕೆ ಏರಿಕೆ…

82
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,272 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,83,360ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 27 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,28,611ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,45,83,360 ಮಂದಿ ಸೋಂಕಿತರ ಪೈಕಿ ಈವರೆಗೆ 4,40,13,999 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.