ದೇಶದಲ್ಲಿ 42,909 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,27,37,939ಕ್ಕೆ ಏರಿಕೆ…

100
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,909 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,27,37,939ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 380 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,38,210ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,27,37,939 ಮಂದಿ ಸೋಂಕಿತರ ಪೈಕಿ ಈವರೆಗೆ 3,19,23,405 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.