ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 50,407 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,25,86,544ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 804 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,07,981ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,25,86,544 ಮಂದಿ ಸೋಂಕಿತರ ಪೈಕಿ ಈವರೆಗೆ 4,14,68,120 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










