ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 51,667 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,01,34,445ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,329 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,93,310 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,01,34,445 ಮಂದಿ ಸೋಂಕಿತರ ಪೈಕಿ ಈವರೆಗೆ 2,91,28,267 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










