ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 53,476 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,17,87,534ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 251 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,60,692ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,17,87,534 ಮಂದಿ ಸೋಂಕಿತರ ಪೈಕಿ ಈವರೆಗೆ 1,12,31,650 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










