ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,383 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,58,425ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 20 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,28,449ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,45,58,425 ಮಂದಿ ಸೋಂಕಿತರ ಪೈಕಿ ಈವರೆಗೆ 4,39,84,695 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










