ದೇಶದಲ್ಲಿ 60,471 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,95,70,881ಕ್ಕೆ ಏರಿಕೆ…

119
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 60,471 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,95,70,881ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,726 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,77,031 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,95,70,881 ಮಂದಿ ಸೋಂಕಿತರ ಪೈಕಿ ಈವರೆಗೆ 2,82,80,472 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.