ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 62,480 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,97,62,793ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,587 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,83,490 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,97,62,793 ಮಂದಿ ಸೋಂಕಿತರ ಪೈಕಿ ಈವರೆಗೆ 2,85,80,647 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










